CRIME

ಮಂಡ್ಯದಲ್ಲಿ ಪತ್ನಿಯನ್ನು ಕೊಚ್ಚಿ ಹತ್ಯೆ:ಪತಿ ಬಂಧನ

admincoorgdaily

ಮಂಡ್ಯ, ಅ. 22: ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಪತಿ ಹತ್ಯೆ ಮಾಡಿದ ಘಟನೆ ಮಂಡ್ಯದಲ್ಲಿ ಮಂಗಳವಾರ ತಡರಾತ್ರಿ ಬೆಳಕಿಗೆ ಬಂದಿದೆ.

ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದ ನಿವಾಸಿ ಲೋಕೇಶ್ ಎಂಬವರು ತಮ್ಮ ಪತ್ನಿ ಶ್ವೇತಾ (36) ಅವರನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. 

ದಂಪತಿಯ ನಡುವೆ ಉಂಟಾದ ವಾಗ್ವಾದಕ್ಕೆ ಸಿಟ್ಟಿನಿಂದ ಪತಿ ಮಚ್ಚು ತೆಗೆದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಆರೋಪಿ ಲೋಕೇಶ್ ಅವರನ್ನು ಬಂಧಿಸಿದ್ದಾರೆ. ಮೃತ ಶ್ವೇತಾರ ದೇಹವನ್ನು ಪೋಸ್ಟ್‌ಮಾರ್ಟಂಗಾಗಿ ಮಂಡ್ಯ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.