ಸಾವಿರ ರೂಪಾಯಿಗೆ ಹೆಂಡತಿಯನ್ನೇ ಸ್ನೇಹಿತರಿಗೆ ಮಾರಿದ ಗಂಡ

Feb 10, 2026 - 11:31
 0  2.6k
ಸಾವಿರ ರೂಪಾಯಿಗೆ ಹೆಂಡತಿಯನ್ನೇ ಸ್ನೇಹಿತರಿಗೆ ಮಾರಿದ ಗಂಡ

ಬದೌನ್, ಫೆ 10: ಸಾವಿರ ರೂಪಾಯಿಗಾಗಿ ವ್ಯಕ್ತಿಯೊಬ್ಬ ತನ್ನ ಹೆಂಡತಿ(Wife)ಯನ್ನೇ ಸ್ನೇಹಿತರಿಗೆ ಮಾರಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಒಂದು ಸಾವಿರ ರೂಪಾಯಿಗೆ ಬದಲಾಗಿ ತನ್ನ ಸ್ನೇಹಿತರಿಗೆ ಒಪ್ಪಿಸಿದ್ದಾನೆ ಎಂದು ಆರೋಪಿಸಲಾಗಿದೆ.ಇಬ್ಬರು ಸ್ನೇಹಿತರು ಆ ವ್ಯಕ್ತಿಯ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯ ನಂತರ, ಮಹಿಳೆ ಪೊಲೀಸರಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.

ಪೊಲೀಸರು ಇಬ್ಬರು ಸ್ನೇಹಿತರು ಮತ್ತು ಮಹಿಳೆಯ ಪತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಮಹಿಳೆಯ ಪತಿಯ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ. ಮಹಿಳೆಯ ಪತಿಗಾಗಿ ಹುಡುಕಾಟ ನಡೆಯುತ್ತಿದೆ.ಬದೌನ್ ಜಿಲ್ಲೆಯ ಫೈಜ್‌ಗಂಜ್ ಬೆಹ್ತಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಮಹಿಳೆಯೊಬ್ಬರ ಮೇಲೆ ಆಕೆಯ ಪತಿಯ ಸ್ನೇಹಿತರೇ ಅತ್ಯಾಚಾರವೆಸಗಿದ್ದಾರೆ. ಆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ಸಂಜೆ ಗ್ಯಾಸ್ ಏಜೆನ್ಸಿಗೆ ಹೋಗುತ್ತಿದ್ದಾಗ, ತನ್ನ ಪತಿ ಬಾಲ್ ಕಿಶನ್ ಮತ್ತು ಪಪ್ಪು ಎಂಬ ಯುವಕರಿಂದ ಒಂದು ಸಾವಿರ ರೂಪಾಯಿಗಳನ್ನು ತೆಗೆದುಕೊಂಡು ತನ್ನನ್ನು ಅವರೊಂದಿಗೆ ಕಳುಹಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಪೊಲೀಸರ ಪ್ರಕಾರ, ಮಹಿಳೆ ತನ್ನ ಗಂಡನ ಸ್ನೇಹಿತರೊಂದಿಗೆ ಹಿಂದಿರುಗುತ್ತಿದ್ದಾಗ, ಇಬ್ಬರೂ ತನ್ನನ್ನು ತೋಟಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಘಟನೆ ನಂತರ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರ ಆಧಾರದ ಮೇಲೆ ಬಾಲ್ ಕಿಶನ್, ಪಪ್ಪು ಮತ್ತು ಮಹಿಳೆಯ ಪತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಆರೋಪಿ ಬಾಲ್ಕಿಶನ್ ಮತ್ತು ಪಪ್ಪುವನ್ನು ಬಂಧಿಸಿದ್ದಾರೆ, ಮಹಿಳೆಯ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ, ಸೋಮವಾರ ಪೊಲೀಸರು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

What's Your Reaction?

Like Like 0
Dislike Dislike 0
Love Love 0
Funny Funny 2
Angry Angry 2
Sad Sad 6
Wow Wow 0