ಬಿಲ್ಲವ ಸಮಾಜದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ: ಶಾಸಕ ಎಎಸ್ ಪೊನ್ನಣ್ಣ
ನಾಪೋಕ್ಲು:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ನಾಪೋಕ್ಲುವಿನಲ್ಲಿ ಬಿಲ್ಲವ ಸಮಾಜದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಆಟಿಡೊಂಜಿ ದಿನ 2025 ಎಂಬ ಕಾರ್ಯಕ್ರಮದಲ್ಲಿ ಬೃಹತ್ ರಕ್ತದಾನ ಶಿಬಿರ ಬಿಲ್ಲವ ಸಮಾಜದ ಮಹಾಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಒಳಗೊಂಡಿತ್ತು.
ನಾಪೋಕ್ಲು ಕೊಡವ ಸಮಾಜದಲ್ಲಿ ಆಯೋಜನೆಗೊಂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾ ಶಾಸಕರು, ಬಿಲ್ಲವ ಸಮಾಜದವರು ಅವರದೇ ಆದ ವಿಶಿಷ್ಟ ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ. ಎಲ್ಲರಿಗೂ ಆದರ್ಶಪ್ರಾಯರಾದ ಸಮಾಜ ಸುಧಾರಕ ಶ್ರೀ ನಾರಾಯಣ ಗುರುರವರ ಹಿಂಬಾಲಕರಾದ ಬಿಲ್ಲವ ಸಮಾಜದವರು, ಸಮಾಜದ ಎಲ್ಲಾ ಆಯಾಮಗಳಲ್ಲಿ ಮುನ್ನಲೆಗೆ ಬರಬೇಕೆಂದು ಕರೆ ನೀಡಿದರು. ಅತ್ಯಂತ ಶ್ರಮಜೀವಿಗಳು ಹಾಗು ಸ್ವಾಭಿಮಾನಿಗಳಾದ ಬಿಲ್ಲವ ಸಮಾಜದವರು ಇಂದು ಈ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದಾಗ ನನಗೆ ಅತ್ಯಂತ ಹೆಮ್ಮೆ ಅನಿಸಿತು ಎಂದು ಶಾಸಕರು ಬಣ್ಣಿಸಿದರು. ಸಮಾಜದ ಅಭಿವೃದ್ಧಿಗೆ ಯಾವುದೇ ಬೇಡಿಕೆ ಇದ್ದರೂ ತಾನು ಅದಕ್ಕೆ ಸ್ಪಂದಿಸುವುದಾಗಿ ಇದೇ ಸಂದರ್ಭದಲ್ಲಿ ಸಮಾಜ ಬಾಂಧವರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಲ್ಲವ ಸಮಾಜದ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು, ನಾಪೋಕ್ಲು ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಬಿಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷ ಅಪ್ರು ರವೀಂದ್ರ ,ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ, ಕಕ್ಕಬೆ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಲಿಯಂಡ ಸಂಪನ್ ಅಯ್ಯಪ್ಪ, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹಂಸ, ಡಿಸಿಸಿ ಉಪಾಧ್ಯಕ್ಷರು ಅಬ್ದುಲ್ ರೆಹಮಾನ್, ಗಿರೀಶ್ ಶೇರಿ, ಸಬಾ ತಿಮ್ಮಯ್ಯ, ಅರುಣ್ ದೇಬ, ಮುತ್ತಪ್ಪ, ದಯಾ ಚಿನ್ನಪ್ಪ, ಮಚುರ ರವಿ, ವಾಸಿಮ್, ಬಿಲ್ಲವ ಸಮಾಜದ ಸದಸ್ಯರು ಹಾಗೂ ಪ್ರಮುಖರುಉಪಸ್ಥಿತರಿದ್ದರು.