ನಾಪೋಕ್ಲು ವ್ಯಾಪ್ತಿಯಲ್ಲಿ ನಾನು ದಬ್ಬಾಳಿಕೆ ನಡೆಸುತ್ತಿದೆ ಎಂಬ ಆರೋಪ ಸಾಬಿತಾದರೆ ರಾಜೀನಾಮೆ ನೀಡುತ್ತೇನೆ: ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ ಇಸ್ಮಾಯಿಲ್ ಸವಾಲು
ಮಡಿಕೇರಿ:ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ನಾಪೋಕ್ಲು ವ್ಯಾಪ್ತಿಯಲ್ಲಿ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಸಾಬಿತಾದರೇ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಹೇಳಿದರು.
ಇತ್ತೀಚೆಗೆ ಕುಟುಂಬವೊಂದು ಸುದ್ದಿಗೋಷ್ಠಿ ನಡೆಸಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ನಾಪೋಕ್ಲು ವ್ಯಾಪ್ತಿಯಲ್ಲಿ ದಬ್ಬಾಳಿಕೆ ಮಾಡುತ್ತಿದ್ದಾರೆ. ಪೊಲೀಸರನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದರು.ಅಲ್ಲದೇ, ಆ ಕುಟುಂಬದ ವ್ಯಕ್ತಿಯ ಮೇಲೆ ಇಸ್ಮಾಯಿಲ್ ಹಾಗೂ ಪುತ್ರರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಸತ್ಯಕ್ಕೆ ದೂರವಾಗಿದೆ.ಇವರ ಆರೋಪ ಸಾಬಿತಾದರೆ ತನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದರು.
ಶರೀಫ್ ಎಂಬಾತ ಬೈಕ್‌ನಲ್ಲಿ ಬಿದ್ದು ಗಾಯಮಾಡಿಕೊಂಡಿದ್ದಾರೆ ಹೊರತು ನಾವು ಹಲ್ಲೆ ಮಾಡಿಲ್ಲ. ಆತನ ಚಲನವಲನಗಳು ನಾಪೋಕ್ಲುವಿನ ಕೆಲವು ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಅದನ್ನು ಪರಿಶೀಲಿಸಬಹುದು ಎಂದ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಇಂತವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ತನ್ನಿರಾ ಮೈನಾ ಮಾತನಾಡಿ, ವಿರೋಧ ಪಕ್ಷಗಳು ಬಡ ಕುಟುಂಬವನ್ನು ರಾಜಕೀಯ ದ್ವೇಷದಿಂದ ಬಳಸಿಕೊಳ್ಳುತ್ತಿದೆ. ತಮ್ಮ ಪಕ್ಷದ ಮುಖಂಡರ ವರ್ಚಸ್‌ನ್ನು ಹಾಳು ಮಾಡುವ ಸಲುವಾಗಿ ಆರೋಪ ಮಾಡಲು ತೊಡಗಿಸಿಕೊಂಡಿದೆ. ಈ ಹಿನ್ನೆಲೆ ಕಾನೂನು ಹೋರಾಟ ಮಾಡಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಸದಸ್ಯ ಕಾಳೇರಮ್ಮನ ಕುಮಾರ್, ಹಾಕತ್ತೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪಿಯುಶ್ ಪರೇರಾ, ಮಡಿಕೇರಿ ಬ್ಲಾಕ್ ಸಂಘಟನಾ ಕಾರ್ಯದರ್ಶಿ ವಸಂತ್ ಭಟ್ ಇದ್ದರು.