IPL 2026 🏏

IPL2026;ಗುಜರಾತ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲುವು

admincoorgdaily

IPL2026;ಗುಜರಾತ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲುವು

ನ್ಯೂ ಚಂಡಿಗಡ, ಮಾ.31: ಐಪಿಎಲ್ ಟಿ-20 ಪಂದ್ಯಾವಳಿಯ ನಾಲ್ಕನೇ ಪಂದ್ಯದಲ್ಲಿ ಕೂಪರ್ ಕೊನೊಲಿ ಅರ್ಧಶತಕದ (ಔಟಾಗದೆ 72, 44 ಎಸೆತ, 5 ಬೌಂಡರಿ, 5 ಸಿಕ್ಸರ್ ಸಹಾಯದಿಂದ ಆತಿಥೇಯ ಪಂಜಾಬ್ ಕಿಂಗ್ಸ್ ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಮೂರು ವಿಕೆಟ್ ಗಳ ಅಂತರದಿಂದ ಮಣಿಸಿ ಗೆಲುವಿನ ಆರಂಭ ಮಾಡಿದೆ.

 ಮಂಗಳವಾರ ಟಾಸ್ ಗೆದ್ದ ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಗುಜರಾತ್ ತಂಡವನ್ನು ಬ್ಯಾಟಿಂಗ್ಗೆ ಇಳಿಸಿದರು. ಗುಜರಾತ್ ತಂಡವು ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ಗಳ ನಷ್ಟಕ್ಕೆ 162 ರನ್ ಗಳಿಸಿತು.