IPL 2026 🏏

IPL2026;ಸಮೀರ್ ರಿಜ್ವಿ ಅಧ್ಬುತ ‌ಬ್ಯಾಟಿಂಗ್,ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು

admincoorgdaily

IPL2026;ಸಮೀರ್ ರಿಜ್ವಿ ಅಧ್ಬುತ ‌ಬ್ಯಾಟಿಂಗ್,ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು

ದೆಹಲಿ: ಡೆಲ್ಲಿ ಕ್ಯಾಪಿಟಲ್ಸ್‌ಗೆ ಎರಡನೇ ಗೆಲುವು ಸಮೀರ್ ರಿಜ್ವಿ ಅವರ ಅದ್ಭುತ ಪ್ರದರ್ಶನದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿತು.

ಅರುಣ್ ಜೇಟ್ಲಿ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್‌ಗಳಲ್ಲಿ ಆರು ವಿಕೆಟ್‌ಗಳಿಗೆ 162 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ಡೆಲ್ಲಿ ತಂಡವು ಸಮೀರ್ ರಿಜ್ವಿ ಅವರ 90 ರನ್‌ಗಳ ಇನ್ನಿಂಗ್ಸ್‌ನಿಂದ 18.1 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳಿಗೆ 164 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು.