IPL2026;ಚೆನ್ನೈಗೆ ಸತತ ಎರಡನೇ ಸೋಲು;CSK ವಿರುದ್ಧ ಗೆದ್ದ ಪಂಜಾಬ್

Apr 3, 2026 - 23:46
 0  185
IPL2026;ಚೆನ್ನೈಗೆ  ಸತತ ಎರಡನೇ ಸೋಲು;CSK ವಿರುದ್ಧ ಗೆದ್ದ ಪಂಜಾಬ್

ಚೆನ್ನೈ ಎ.3: ನಾಯಕ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ (50 ರನ್, 29 ಎಸೆತ, 4 ಬೌಂಡರಿ, 3 ಸಿಕ್ಸರ್ ನೆರವಿನಿಂದ ಶುಕ್ರವಾರ ನಡೆದ ಏಳನೇ ಐಪಿಎಲ್ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಐದು ವಿಕೆಟ್ ಗಳ ಅಂತರದಿಂದ ಮಣಿಸಿತು.

 ಪಂದ್ಯಾವಳಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ CSK ತಂಡವು ಅಗ್ರ ಕ್ರಮಾಂಕದ ಬ್ಯಾಟರ್ ಆಯುಷ್‌ ಮ್ಹಾತ್ರೆ ಅವರ ಆಕರ್ಷಕ ಅರ್ಧಶತಕದ (73 ರನ್, 43 ಎಸೆತ, 6 ಬೌಂಡರಿ, 5 ಸಿಕ್ಸ‌ರ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿತು.

ಗೆಲ್ಲಲು 210 ರನ್ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡವು 18.4 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 210 ರನ್ ಗಳಿಸಿತು. ಐದು ಬಾರಿಯ ಚಾಂಪಿಯನ್ ಚೆನ್ನೈ ತಂಡ ಸತತ ಎರಡನೇ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಉಳಿದಿದೆ.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0