IPL2026:ಕೊನೆಯ ಓವರ್ ನಲ್ಲಿ ತುಷಾರ್ ದೇಶಪಾಂಡೆ ಕಮಾಲ್; ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸತತ ಎರಡನೇ ಗೆಲುವು
ಅಹಮದಾಬಾದ್; ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 9ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ (GT vs RR) ತಂಡಗಳು ಮುಖಾಮುಖಿಯಾಗಿದ್ದವು.
ಈ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್ ಟೈಟನ್ಸ್ ಲೀಗ್ನಲ್ಲಿ ಸತತ ಎರಡನೇ ಪಂದ್ಯವನ್ನು ಸೋತರೆ, ಇತ್ತ ಸಾಂಘಿಕ ಪ್ರದರ್ಶನ ನೀಡಿದ ರಾಜಸ್ಥಾನ್ ಸತತ ಎರಡನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 204 ರನ್ ಕಲೆಹಾಕಲಷ್ಟೇ ಶಕ್ತವಾಗಿ 7 ರನ್ಗಳಿಂದ ಸೋಲೊಪ್ಪಿಕೊಂಡಿತು.