ಐಟಿಡಿಪಿ ಇಲಾಖೆಯ ನೂತನ ಕಚೇರಿ ಕಟ್ಟಡ ಸಚಿವರಿಂದ ಉದ್ಘಾಟನೆ
admincoorgdaily
ಮಡಿಕೇರಿ:-ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ(ಐಟಿಡಿಪಿ) ನೂತನ ಕಚೇರಿ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ ಅವರು ಶನಿವಾರ ಉದ್ಘಾಟಿಸಿದರು.
ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್. ಹೊನ್ನೇಗೌಡ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಇತರರು ಇದ್ದರು.