ಶಾಂತಿ-ಸೌಹಾರ್ದತೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸೌಹಾರ್ದ-ಸದೃಢ ಭಾರತ ನಿರ್ಮಾಣ ಸಾಧ್ಯ: ಶಾಸಕ ಎ.ಎಸ್ ಪೊನ್ನಣ್ಣ ಅಭಿಪ್ರಾಯ

ಶಾಂತಿ-ಸೌಹಾರ್ದತೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸೌಹಾರ್ದ-ಸದೃಢ ಭಾರತ ನಿರ್ಮಾಣ ಸಾಧ್ಯ: ಶಾಸಕ ಎ.ಎಸ್ ಪೊನ್ನಣ್ಣ ಅಭಿಪ್ರಾಯ

ಗೋಣಿಕೊಪ್ಪ:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ತಿತಿಮತಿಯಲ್ಲಿ, ಈದ್ ಮಿಲಾದ್ ಪ್ರಯುಕ್ತ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭಾಗವಹಿಸಿದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಶಾಸಕರು, ಈದ್ ಮಿಲಾದ್ ಹಬ್ಬವು ಪ್ರಪಂಚದಾದ್ಯಂತ ಆಚರಿಸಲ್ಪಡುತ್ತಿದ್ದು, ಇದು ಶಾಂತಿಯ ಸಂದೇಶವನ್ನು ಸಾರುವ ಹಬ್ಬವಾಗಿದೆ. ಈ ಕಾರ್ಯಕ್ರಮವು ನಾಡಿನ ಎಲ್ಲಾ ಜನಾಂಗದವರು ಶಾಂತಿ ಸೌಹಾರ್ದತೆಯಿಂದ ಸಹಬಾಳ್ವೆ ಮಾಡಬೇಕೆಂಬ ಸಂದೇಶವನ್ನು ಸಾರುತ್ತದೆ ಹಾಗೂ ಇದನ್ನು ನಾವೆಲ್ಲರೂ ಅಳವಡಿಸಿಕೊಂಡಲ್ಲಿ ಸೌಹಾರ್ದ-ಸದೃಢ ಭಾರತ ನಿರ್ಮಾಣವಾಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಬಣ್ಣಿಸಿದರು.

 ಇದೇ ಸಂದರ್ಭದಲ್ಲಿ ಸ್ಮಾರ್ಟ್ ಕ್ಲಾಸ್ ಕೊಠಡಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಿತಿಮತಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ನವೀನ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾನಂಡ ಪೃಥ್ವಿ, ಮುನೀರ್, ಮುಸ್ತಾಫಾ, ರಫೀಕ್ ವಾಕವಿ, ರಾಮಕೃಷ್ಣ, ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.