ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ: ಪ್ರತ್ಯೇಕ ಪ್ರಕರಣದಲ್ಲಿ ಅಸ್ಸಾಂ ರಾಜ್ಯದ ಇಬ್ಬರ ಬಂಧನ

Jan 7, 2026 - 08:38
 0  695
ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ: ಪ್ರತ್ಯೇಕ ಪ್ರಕರಣದಲ್ಲಿ ಅಸ್ಸಾಂ ರಾಜ್ಯದ ಇಬ್ಬರ ಬಂಧನ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ಕೊಡಗು ಜಿಲ್ಲಾ ಪೊಲೀಸ್ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಅಸ್ಸಾಂ ರಾಜ್ಯದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಸ್ಸಾಂ ರಾಜ್ಯದ ದರಾಂಗ್ ಜಿಲ್ಲೆಯ ನಿವಾಸಿ ಮುಸ್ತಫ ಅಲಿ (25) ಇದೆ ಜಿಲ್ಲೆಯ ಮಾಜೂಮ್ ಅಲಿ (34) ಬಂಧಿತ ಆರೋಪಿಗಳಾಗಿದ್ದಾರೆ.

 ದಿನಾಂಕ 6-01-2026ರಂದು ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಹೊದವಾಡ ಗ್ರಾಮದ ರಾಫೆಲ್ಸ್ ಶಾಲೆ ಬಳಿಯ ಬಸ್ ತಂಗುದಾಣದಲ್ಲಿ ಹಾಗೂ ಕುಂಬಳದಾಳು ಗ್ರಾಮದ ಕುಯ್ಯಂಗೇರಿ ರಸ್ತೆಯಲ್ಲಿರುವ ಪ್ರಯಾಣಿಕರ ಬಸ್ ತಂಗುದಾಣದಲ್ಲಿ ಆರೋಪಿಗಳಾದ ಮುಸ್ತಫ ಅಲಿ ಹಾಗೂ ಮಾಜೂಮ್ ಅಲಿ ಅಕ್ರಮ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನಾಪೋಕ್ಲು ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 ಕುಯ್ಯಂಗೇರಿ ಗ್ರಾಮದ ಬಸ್ ತಂಗುದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮುಸ್ತಫ ಅಲಿ ಎಂಬಾತಾನಿಂದ ಮಾರಾಟಕ್ಕೆ ಇಟ್ಟಿದ್ದ 234 ಗ್ರಾಂ ಆಕ್ರಮ ಗಾಂಜಾ ಹಾಗೂ ಮತ್ತೊಂದು ಪ್ರಕರಣದಲ್ಲಿ ರಾಫೆಲ್ಸ್ ಶಾಲೆಯ ಬಳಿಯ ಬಸ್ ತಂಗುದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಾಜೂಮ್ ಅಲಿ ಎಂಬಾತನಿಂದ ಮಾರಾಟಕ್ಕೆ ಇಟ್ಟಿದ್ದ 155ಗ್ರಾಂ ಆಕ್ರಮ ಗಾಂಜಾ ಸಹಿತ ಆರೋಪಿಗಳನ್ನು ವಶಕ್ಕೆಪಡೆದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಅವರ ನಿರ್ದೇಶನದಂತೆ,ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಸೂರಜ್, ಗ್ರಾಮಾಂತರ ಪ್ರಭಾರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಪಿ.ಜಿ. ರಾಘವೇಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 2
Angry Angry 0
Sad Sad 0
Wow Wow 0