ಸುಂಟಿಕೊಪ್ಪದಲ್ಲಿ:ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, ಆಟೋ ಚಾಲಕನ ವಿರುದ್ಧ ಪೋಕ್ಸೋ ಕೇಸ್
admincoorgdaily

ಸುಂಟಿಕೊಪ್ಪ: ಶಾಲೆಯಿಂದ ಮನೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಟೋ ಚಾಲಕನ ವಿರುದ್ಧ ಸುಂಟಿಕೊಪ್ಪ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಜುಲೈ 29 ರಂದು ಸಂಜೆ ಶಾಲೆಯಿಂದ ಮನೆಗೆ ವಾಪಸ್ಸಾಗುತ್ತಿದ್ದ 12 ವರ್ಷದ ಬಾಲಕಿಯನ್ನು ಆಟೋದಲ್ಲಿ ಕರೆದೊಯ್ದ ಆರೋಪಿ ಪ್ರವೀಣ್, ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಯಾರಿಗೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಬಾಲಕಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
ಸುಂಟಿಕೊಪ್ಪ ಹೋಬಳಿಯ ನಾಕೂರು ಕಾನ್ಸೈಲು ಗ್ರಾಮದ ನಿವಾಸಿ ಆಟೋ ಚಾಲಕ ಪ್ರವೀಣ್ ಈ ಪ್ರಕರಣದ ಆರೋಪಿಯಾಗಿದ್ದಾನೆ. ಘಟನೆ ನಡೆದು ಬಳಿಕ ಬಾಲಕಿ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಶಾಲೆಯ ಶಿಕ್ಷಕರ ಸಲಹೆ ಮೇರೆಗೆ ಆಗಸ್ಟ್ 3 ರಂದು ತಾಯಿ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದರು. ದೂರು ಆಧರಿಸಿ ಪೊಲೀಸರು BNS, ಪೋಕ್ಸೋ ಕಾಯ್ದೆ ಮತ್ತು SC/ST ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.