ನಾಳೆ ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ
ಮಡಿಕೇರಿ:-ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಅಕ್ಟೋಬರ್, 01 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಅಕ್ಟೋಬರ್, 01 ರಂದು ಸಂಜೆ 5 ಗಂಟೆಗೆ ಮಡಿಕೇರಿ ನಗರ ದಸರಾ ಪ್ರಯುಕ್ತ ಮಡಿಕೇರಿ ನಗರದಲ್ಲಿರುವ ದಶಮಂಟಪಗಳ ವೀಕ್ಷಣೆ ಮಾಡಲಿದ್ದಾರೆ. ನಂತರ ಸಂಜೆ 7.30 ಗಂಟೆಗೆ ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಮಡಿಕೇರಿ ನಗರ ದಸರಾ ಸಮಿತಿ ಅವರು ಆಯೋಜಿಸಿರುವ ಆಯುಧಪೂಜೆ ಸಮಾರಂಭ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.