ಸೆ.15 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಸೆ.15 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ
Photo credit: wikipedia

ಮಡಿಕೇರಿ:-ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೆಪ್ಟೆಂಬರ್, 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಸೆಪ್ಟೆಂಬರ್, 15 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿರುವ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ವಿವಿಧ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕೊಡಗು ಜಿಲ್ಲೆಯಲ್ಲಿನ ಮಳೆಹಾನಿ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 3.30 ಗಂಟೆಗೆ ಕಾವೇರಿ ತೀರ್ಥೋದ್ಭವ ಕುರಿತು ಅಧಿಕಾರಿಗಳೊಂದಿಗೆ ಭಾಗಮಂಡಲದಲ್ಲಿ ಪೂರ್ವಭಾವಿ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.