ಆಧುನಿಕ ಯುಗದಲ್ಲಿ ಮಹಿಳೆಯರ ಪಾತ್ರವೂ ಎಲ್ಲಾ ಕ್ಷೇತ್ರಗಳಲ್ಲೂ ಪ್ರಮುಖವಾಗಿದೆ;ಶಾಸಕ ಎಎಸ್ ಪೊನ್ನಣ್ಣ

Mar 8, 2026 - 20:36
 0  265
ಆಧುನಿಕ ಯುಗದಲ್ಲಿ ಮಹಿಳೆಯರ ಪಾತ್ರವೂ ಎಲ್ಲಾ ಕ್ಷೇತ್ರಗಳಲ್ಲೂ ಪ್ರಮುಖವಾಗಿದೆ;ಶಾಸಕ ಎಎಸ್ ಪೊನ್ನಣ್ಣ

ಗೋಣಿಕೊಪ್ಪ; ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

   ಗೋಣಿಕೊಪ್ಪಲು ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ, ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ನಿರ್ವಹಣಾ ಘಟಕದವರು ಆಯೋಜಿಸಿದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರು, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಕೇವಲ ಒಂದು ಆಚರಣೆಯಾಗಿ ಉಳಿಯದೆ ಇದನ್ನು ಪ್ರತಿಯೊಬ್ಬ ಮಹಿಳೆಯು ತನ್ನ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ತಾನು ಸಬಲೇ ಎಂಬುದನ್ನು ಸಾಬೀತುಪಡಿಸಬೇಕು ಎಂದು ಕರೆ ನೀಡಿದರು. ಆಚರಣೆಯು ಕೇವಲ ಒಂದು ದಿನಕ್ಕೆ ಸೀಮಿತವಾದರೂ ಇದರ ಅಳವಡಿಕೆ ದಿನನಿತ್ಯದ ಜೀವನದಲ್ಲಿ ಮಾಡಿಕೊಂಡರೆ ಸಮ ಸಮಾಜದ ನಿರ್ಮಾಣ ಆಗೋದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ಮಾನ್ಯ ಶಾಸಕರು ಬಣ್ಣಿಸಿದರು. ಆಧುನಿಕ ಯುಗದಲ್ಲಿ ಮಹಿಳೆಯರ ಪಾತ್ರವೂ ಎಲ್ಲಾ ಕ್ಷೇತ್ರಗಳಲ್ಲೂ ಪ್ರಮುಖವಾಗಿದೆ. ನಮ್ಮ ನಾಡಿನ ಮಹಿಳೆಯರು ಈ ನಿಟ್ಟಿನಲ್ಲಿ ತಮ್ಮನ್ನು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಸರ್ವತೋಮುಖ ಅಭಿವೃದ್ಧಿಗೆ ಕೊಡುಗೆಯಾಗಿ ಮೂಡಿ ಬರಬೇಕು ಎಂದು ತಮ್ಮ ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ವಿರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷರು ಪಿ ವಿ ಜಾನ್ಸನ್, ತಾಲೂಕು ಇ ಒ ಅಪ್ಪಣ್ಣ, ಅಜ್ಜಿಕುಟ್ಟಿರ ಧನ್ಯ, ಶಾಜಿ ಅಚ್ಚುತನ್, ಖಾಲಿದ್, ಅನಿಶ್, ಮುತಣ್ಣ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0