ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರಾಜಪೇಟೆ ತಾಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸೃಜನಶೀಲ ತರಬೇತಿ ಕಾರ್ಯಕ್ರಮ ಉದ್ಘಾಟನೆ

Feb 21, 2026 - 16:06
 0  196
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರಾಜಪೇಟೆ ತಾಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ  ಸೃಜನಶೀಲ ತರಬೇತಿ ಕಾರ್ಯಕ್ರಮ ಉದ್ಘಾಟನೆ

ವಿರಾಜಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್, ವಿರಾಜಪೇಟೆ ತಾಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಂಜುಶ್ರೀ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸೃಜನಶೀಲ ಕಾರ್ಯಕ್ರಮವಾದ ಸ್ಯಾರಿ ಕುಚ್, ಸ್ಯಾರಿ ಫೋಲ್ಡಿಂಗ್, ಮದುಮಗಳ ಶೃಂಗಾರದ ಬಗ್ಗೆ ತರಬೇತಿ ಕಾರ್ಯಕ್ರಮ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇತ್ತಿಚೆಗೆ ನಡೆಯಿತು.

ಗೋಣಿಕೊಪ್ಪ ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಪ್ರಿಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ, ಗ್ರಾಮ ಪಂಚಾಯಿತಿ ಸದಸ್ಯರಾದ ಪುಷ್ಪ, ತರಬೇತುದಾರರಾದ ರಶ್ಮಿ ಅವರು ದೀಪಾ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಗತಿ ನಿಧಿಯನ್ನು ಪಡೆಯುವುದಲ್ಲದೆ ಅನೇಕ ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಮಾತೃಶ್ರೀ ಅಮ್ಮನವರ ಮಾರ್ಗದರ್ಶನದಲ್ಲಿ ನಡೆಯುವ ಜ್ಞಾನವಿಕಾಸ ಕಾರ್ಯಕ್ರಮದಿಂದ ಅನೇಕ ಕಾರ್ಯಕ್ರಮಗಳನ್ನೂ ಅನುಷ್ಠಾನ ಮಾಡಲು ಸಹಕಾರಿಯಾಗಿದೆ. 

ವಿಶೇಷವಾಗಿ ನಮ್ಮಲ್ಲಿ ಇಂದು ಮಹಿಳೆಯರಿಗೆ ಅತ್ಯವಶ್ಯಕವಾಗಿ ಕಲಿಯಬೇಕಾದ ಸ್ಯಾರಿ ಕುಚ್, ಸ್ಯಾರಿ ಫೋಲ್ಡಿಂಗ್, ಮದುಮಗಳ ಶೃಂಗಾರ ಕಾರ್ಯಕ್ರಮ ಪ್ರಯೋಜನಕಾರಿ ಎಂದು ತಿಳಿಸಿದರು.

ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಪ್ರಿಯ ಕಾರ್ಯಕ್ರಮವನ್ನು ಕುರಿತು ಮಾತನಾಡಿ, ಮಹಿಳೆಯರು ಅವಲಂಬಿಯಾಗಿ ಬದುಕಲು ಈ ತರಹದ ಕಾರ್ಯಕ್ರಮಗಳು ಅವಶ್ಯಕವಿದ್ದು ಇದರ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು. ಸಂಘ ಸಂಸ್ಥೆಗಳಿAದ ಸಿಗುವ ತರಬೇತಿಗಳನ್ನ ಪಡೆದು ಸ್ವಾವಲಂಬಿಯಾಗಿ ಬದುಕಿರಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಉಷಾರಾಣಿ, ಸೇವಾ ಪ್ರತಿನಿಧಿ ವಿಮಲ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0