ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ನಾಳೆ ಸಿ.ಎಸ್.ಆರ್.ನಿಧಿಯಡಿ ನಿರ್ಮಿಸಿರುವ ವಿವಿಧೋದ್ದೇಶ ಸಭಾಂಗಣದ ಉದ್ಘಾಟನೆ ಕಾರ್ಯಕ್ರಮ

Feb 19, 2026 - 10:48
 0  178
ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ನಾಳೆ ಸಿ.ಎಸ್.ಆರ್.ನಿಧಿಯಡಿ ನಿರ್ಮಿಸಿರುವ ವಿವಿಧೋದ್ದೇಶ ಸಭಾಂಗಣದ ಉದ್ಘಾಟನೆ ಕಾರ್ಯಕ್ರಮ

ಕುಶಾಲನಗರ,ಫೆ.19: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ದಿನಾಂಕ 20 -2-2026 ನೇ ಶುಕ್ರವಾರದಂದು ಬೆಳಿಗ್ಗೆ 10.00 ಗಂಟೆಗೆ ಮುಂಬೈನ ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಲಿಮಿಟೆಡ್ ಸಂಸ್ಥೆ ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR: ಸಿ ಎಸ್ ಆರ್) ನಿಧಿಯ ಅನುದಾನದಿಂದ ನಿರ್ಮಾಣವಾಗಿರುವ ವಿವಿಧೋದ್ದೇಶ ಸಭಾಂಗಣದ ಉದ್ಘಾಟನೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ನೂತನ ವಿವಿಧೋದ್ದೇಶ ಸಭಾಂಗಣದ ಉದ್ಘಾಟನೆಯನ್ನು ಶ್ರೀಯುತ ಸುಂದರ ರಾಮನ್ ರಾಮಮೂರ್ತಿ -ಸಿಇಒ ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಲಿಮಿಟೆಡ್. ಇವರು ನೆರವೇರಿಸಲಿದ್ದಾರೆ.

ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರೌಢಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲ ಎ.ಸಿ. ಮಂಜುನಾಥ್ ತಿಳಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲಾ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರು ಮತ್ತು ಸ್ಥಳೀಯ ಜನಪ್ರತಿನಿದಿಗಳು ಹಾಗೂ ಇಲಾಖೆ ಅಧಿಕಾರಿ ವರ್ಗದವರು ಆಗಮಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0