ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ:ಕುಶಾಲನಗರದಲ್ಲಿ ತಗ್ಗು ಪ್ರದೇಶಗಳು ಜಲಾವೃತ

ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ:ಕುಶಾಲನಗರದಲ್ಲಿ ತಗ್ಗು ಪ್ರದೇಶಗಳು ಜಲಾವೃತ

ಮಡಿಕೇರಿ:ಜಿಲ್ಲೆಯಲ್ಲಿ ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಮುಂದಿನ 3 ಗಂಟೆಗಳಲ್ಲಿ ಚಾಮರಾಜನಗರ, ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಉಡುಪಿ, ಉತ್ತರ ಕನ್ನಡದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

 ಕುಶಾಲನಗರದಲ್ಲಿ ಸಂಜೆ 5 ಗಂಟೆಯಿಂದ ಸರಿಸುಮಾರು ಒಂದು ಗಂಟೆ ಕಾಲ ಎಡೆಬಿಡದೆ ಸುರಿದ ಮಳೆಯಿಂದ ಚರಂಡಿಗಳು ಉಕ್ಕಿ ಹರಿದು ರಸ್ತೆಗಳು ಜಲಾವೃತಗೊಂಡು ಸಂಚಾರ ಅಸ್ತವ್ಯಸ್ತ ಉಂಟಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದ ಘಟನೆ ನಡೆಯಿತು.