Kodagu

ವಿರಾಜಪೇಟೆ ಅಂಬೇಡ್ಕರ್ ಬಾಲಕಿಯರ ನಿಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

admincoorgdaily

ವಿರಾಜಪೇಟೆ ಅಂಬೇಡ್ಕರ್ ಬಾಲಕಿಯರ ನಿಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿರಾಜಪೇಟೆ: ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಿರಾಜಪೇಟೆಯ ಡಾ. ಬಿ. ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರದ್ಧೆ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಿಲಯದ ಮೇಲ್ವಿಚಾರಕರಾದ ಸುಮಯ್ಯ ಕೆ.ಎಂ. ಅವರು ಧ್ವಜಾರೋಹಣ ನೆರವೇರಿಸಿ, ದಿನದ ಮಹತ್ವ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನಗಳ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ದಿನಾಚರಣೆಯ ಅಂಗವಾಗಿ ನಿಲಯದ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ತದನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ನಿಲಯದ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.