ಕೊಡಗು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ

Aug 15, 2026 - 12:33
 0  79
ಕೊಡಗು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ

ಮಡಿಕೇರಿ ಆ.15:- ಕೊಡಗು ಜಿಲ್ಲಾಡಳಿತ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಅರ್ಥಪೂರ್ಣವಾಗಿ ಶನಿವಾರ ನಡೆಯಿತು.

ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.        

     ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಕಲಾವತಿ ಪಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಏರ್ ಮಾರ್ಷಲ್ (ನಿವೃತ್ತ) ನಂದಾ ಕಾರ್ಯಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್ ಹಾದಿಮನಿ, ಮಾಜಿ ಸೈನಿಕರು, ಜಿಲ್ಲಾ ಹಾಗೂ ತಾಲ್ಲೂಕಿನ‌ ಅಧಿಕಾರಿಗಳು, ವಿದ್ಯಾರ್ಥಿಗಳು, ಇತರರು ಪಾಲ್ಗೊಂಡಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0