ಮರಾಟಿ ಸಮಾಜದಿಂದ ಸ್ವಾತಂತ್ರ್ಯ ದಿನಾಚರಣೆ
admincoorgdaily

ಮಡಿಕೇರಿ: ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ತಾಳತ್ತಮನೆಯ ಸಂಘದ ಸಭಾ ಭವನದಲ್ಲಿ ೮೦ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಎಂ.ಎಂ.ಪರಮೇಶ್ವರ್ ವರು, ಇಂದು ಸ್ವಾತಂತ್ರ್ಯ ಕಾರ್ಯಕ್ರಮವನ್ನು ಆಚರಿಸುತ್ತಿರುವುದು ನಮ್ಮ ಸೌಭಾಗ್ಯ. ಇದು ಸ್ವಾತಂತ್ರ್ಯ ಹೋರಾಟಗಾರರ ಹೋರಾಟ ಮತ್ತು ತ್ಯಾಗದ ಫಲವಾಗಿದೆ. ಜೀವನದಲ್ಲಿ ನೆನಪಿಸಿಕೊಳ್ಳಬೇಕಾದ ಮಹತ್ವದ ದಿನ ಇದಾಗಿದೆ ಎಂದು ಅಭಿಪ್ರಾಯಪಟ್ಟರು. ಅಭಿವೃದ್ಧಿಶೀಲ ದೇಶಕ್ಕೆ ತಂತ್ರಜ್ಞಾನ ಅಗತ್ಯವಿದೆ. ಆದರೆ, ತಂತ್ರಜ್ಞಾನದ ಜೊತೆಗೆ ದೇಶಾಭಿಮಾನವನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸ್ವಾತಂತ್ರ್ಯದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸವಾಗಬೇಕು ಎಂದರು. ಈ ಸಂದರ್ಭ ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳು, ಸಮಾಜಬಾಂಧವರಿದ್ದರು.