ಕಡಂಗ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಡಂಗ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಡಂಗ: ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನಿವೃತ್ತ ಸೈನಿಕ ಶಾಲೆಯ ಪೂರ್ವ ವಿದ್ಯಾರ್ಥಿ ಸಲಾಂ ನೆರವೇರಿಸಿದರು . ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಫಾತಿಮಾ ವಹಿಸಿದರು. ಕಾರ್ಯಕ್ರಮದ ಸ್ವಾಗತವನ್ನು ಶಿಕ್ಷಕಿ ವಿಮಲಾ ಕೆ ಎಂ ನೆರವೇರಿಸಿದರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದ ನಿರೂಪಣೆಯನ್ನು ಬಬಿತಾ ಏ ಟಿ ನಿರ್ವಹಿಸಿದರು. ವಿದ್ಯಾರ್ಥಿಗಳಿಗೆ ಬಹುಮಾನವನ್ನು ವತ್ಸಲ ವಿತರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದಾನಿಗಳಾದ ಉದಿಯಂಡ ಡಿ ಚೆಂಗಪ್ಪ ಕೋದಂಡ ಮಂಜುಳಾ, ಕೆ ಜೆ ಶಾರದಾ ಸಲಾಂ, ಕೆ ಜೆ ಪ್ರಕಾಶ್, ಕೊಡಿರ ಪ್ರಸನ್ನ ತಮ್ಮಯ್ಯ, ಜಕರಿಯ, ಗಫೂರ್,ಶ್ರೀಜಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪೋಷಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

ವರದಿ:ನೌಫಲ್