Kodagu

ಮಡಿಕೇರಿ ‌ತ್ಯಾಗರಾಜನಗರ ಅಂಗನವಾಡಿ ‌ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

admincoorgdaily

ಮಡಿಕೇರಿ: ತ್ಯಾಗರಾಜನಗರ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಸ್ಥಳೀಯ SDPI ಕೌನ್ಸಿಲರ್ ಮೇರಿ ವೇಗಸ್ ನೇರವೇರಿಸಿ ದಿನದ ಸಂದೇಶವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಮರಣೋತ್ತರ ಪರೀಕ್ಷೆ ವಿಭಾಗದಲ್ಲಿ ಕಳೆದ ಹನ್ನೆರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ರಾಬರ್ಟ್ ರಾಡಿಗ್ರಸ್ ರವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಮತ್ತು ಸಾಮಾಜಿಕ ಮುಖಂಡರುಗಳು ಹಾಜರಿದ್ದರು.