ಪಾಲಿಬೆಟ್ಟ ಸರ್ಕಾರಿ ತಮಿಳು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪಾಲಿಬೆಟ್ಟ ಸರ್ಕಾರಿ ತಮಿಳು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪಾಲಿಬೆಟ್ಟ: ಪಾಲಿಬೆಟ್ಟ ಸರ್ಕಾರಿ ತಮಿಳು ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆಚರಿಸಲಾಯಿತು. ಸಮಾಜ ಸೇವಕ ಜಿ.ವೇಲು ಧ್ವಜಾರೋಹಣ ಮಾಡುವುದರ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಹೇಳಿದರು.

ಕೊಡಗು ಜಿಲ್ಲಾ ಕಾವೇರಿ ತಮಿಳು ಸಂಘದ ಅಧ್ಯಕ್ಷ ಮೈಕಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ದೇಶಕ್ಕಾಗಿ ತ್ಯಾಗ ಮಾಡಿದವರನ್ನ ಸ್ಮರಿಸುವ ಮೂಲಕ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರ ಜೀವನ ಸಂದೇಶಗಳನ್ನು ಮೈಗೂಡಿಸಿಕೊಂಡು ದೇಶಪ್ರೇಮದ ಮೂಲಕ ಸೌಹಾರ್ದ ಸಂದೇಶ ಸಾರುವುದರೊಂದಿಗೆ ಐಕ್ಯತೆಯಿಂದ ಬಾಳೋಣ ಎಂದರು. ಇದೇ ಸಂದರ್ಭ ತಮಿಳು ಸಂಘದ ವತಿಯಿಂದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊಡೆಗಳನ್ನ ವಿತರಣೆ ಮಾಡಲಾಯಿತು.

ಈ ಸಂದರ್ಭ ಸರ್ಕಾರಿ ತಮಿಳು ಶಾಲಾ ಮುಖ್ಯ ಶಿಕ್ಷಕಿ ಮಲ್ಲಿಗೇಶ್ವರಿ, ಸಹ ಶಿಕ್ಷಕಿಯರಾದ ಧರ್ಮಿಣಿ, ದಿವ್ಯ, ಕಾವೇರಿ ತಮಿಳು ಸಂಘದ ಜಿಲ್ಲಾ ಉಪಾಧ್ಯಕ್ಷ ಕಣ್ಣನ್, ಖಜಾಂಜಿ ತಂಬಿ, ಸಲಹೆಗಾರ ಶೇಖರ್, ಪ್ರಮುಖರಾದ ವೇಲ್, ಚೆಲ್ಲದೊರೆ, ಮುರುಗೇಶ್, ರಾಜು, ಸರವಣ, ದಿನೇಶ್, ಮಾರಿ ಕಣ್ಣು, ಸುಂದರರಾಜ್ ಸೇರಿದಂತೆ ಸಮಿತಿಯ ಸದಸ್ಯರುಗಳ ಹಾಗೂ ಆಡಳಿತ ಮಂಡಳಿಯ ಪ್ರಮುಖರು ಹಾಜರಿದ್ದರು.