Kodagu

ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

admincoorgdaily

ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಸೋಮವಾರಪೇಟೆ: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ವತಿಯಿಂದ ಚೌಡ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಯೂನಿಫಾರಂ, ಸಾಕ್ಸ್ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ ಯೂನಿಫಾರಂ ವಿತರಿಸುವ ಮೂಲಕ ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಯಿತು.

ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ನೆರವಾಗುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜೆಸಿಐ ಅಧ್ಯಕ್ಷೆ ಜೆಸಿ ಮಂಜುಳಾ ಸುಬ್ರಮಣಿ, ಕಾರ್ಯದರ್ಶಿ ಜೆಸಿ ಜ್ಯೋತಿ, ಖಜಾಂಚಿ ಜೆಸಿ ಪವಿತ್ರ, ನಿಕಟಪೂರ್ವ ಅಧ್ಯಕ್ಷೆ ಜೆಸಿ ಜಗದಂಬಾ, ಜೆಸಿ ಅರುಣ್, ಜೆಸಿ ಮನು, ಜೆಸಿ ಪುಷ್ಪಕ್, ಜೆಸಿ ಲಿಂಗಾರಾಜು, ಜೆಸಿ ಗುರುಪ್ರಸಾದ್, ಜೆಸಿ ಪ್ರತಿಮಾ ಸೇರಿದಂತೆ ಜೆಸಿ ಬಂಧುಗಳು, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.