Kodagu

ಕಡಂಗ ಆಟೋ ಚಾಲಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

admincoorgdaily

ಕಡಂಗ:ಸ್ಥಳೀಯ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಊರಿನ ಹಿರಿಯ ವ್ಯಕ್ತಿಗಳಿಂದ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ವಾಗತವನ್ನು ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಸುಗುಣ ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕೋಡಿರ ಪ್ರಸನ್ನ ತಮ್ಮಯ್ಯನವರು ದೇಶಭಕ್ತಿಯ ಬಗ್ಗೆ ಹಾಗೂ ಸ್ವಾತಂತ್ರ್ಯವು ಬಂದ ಹಾದಿಯ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಆಟೋ ಚಾಲಕರದ ಹಂಸ,ಸಚಿನ್ ಅಶೋಕ್, ಉಮರ್, ಆಸಿಫ್, ನಾಗರಾಜು, ತಿಮ್ಮಯ್ಯ, ಮುಂತಾದವರು ಉಪಸ್ಥಿತರಿದ್ದರು ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ವಿತರಿಸಲಾಯಿತು.

ವರದಿ: ನೌಫಲ್