ಪಾಲಿಬೆಟ್ಟ ಯಂಗ್ ಇಂಡಿಯಾ ಯೂತ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಪಾಲಿಬೆಟ್ಟ ಯಂಗ್ ಇಂಡಿಯಾ ಯೂತ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಪಾಲಿಬೆಟ್ಟ ಯಂಗ್ ಇಂಡಿಯಾ ಯೂತ್ ಕ್ಲಬ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಸಲೀಂ(ಅಪ್ಪಿ)ರವರು ಧ್ವಜಾರೋಹಣ ನೆರವೇರಿಸಿದರು. 1970ರ ದಶಕದಲ್ಲಿ ಯಂಗ್ ಇಂಡಿಯಾ ಯುವಕ ಸಂಘದ ಸದಸ್ಯರಾಗಿದ್ದ ನಂತರದ ದಿನಗಳಲ್ಲಿ ಒಮಾನ್ ದೇಶದ ಹಾಕಿ ಫೆಡರೇಷನ್ ನ ಉನ್ನತ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಪಾಲಿಬೆಟ್ಟ ಹಿರಿಯರಾದ ಅಬ್ದುಲ್ ಖಾದರ್ ರವರನ್ನು ಸನ್ಮಾನಿಸಲಾಯಿತು.

 ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮೂಕಂಡ ವಿಜು ಸುಬ್ರಮಣಿ,ಪಾಲಿಬೆಟ್ಟ ಠಾಣಾಧಿಕಾರಿ ಮಂಜುನಾಥ್ ರವರು ಪಾಲ್ಗೊಂಡರು.ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು,ಸದಸ್ಯರು ಭಾಗವಹಿಸಿದ್ದರು. ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.