ವಯಕೋಲ್ ಮಸ್ಜಿದುಲ್ ರಹ್ಮಾನ್ ಮತ್ತು ರೌಳತುಲ್ ಉಲೂಂ ಮದರಸ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ
admincoorgdaily

ವಯಕೋಲ್: ವಯಕೋಲ್ ಮಸ್ಜಿದುಲ್ ರಹ್ಮಾನ್ ಮತ್ತು ರೌಳತುಲ್ ಉಲೂಂ ಮದ್ರಸ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಹ್ಮದ್ ಹಾಜಿ ವಹಿಸಿದ್ದರು.
ರಫೀಖ್ ಅಝ್ಹರಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಅಬು ವಯಕೋಲ್ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಶಿಹಾಬ್, ಹಫೀಝ್ ಎರಮು ಸೇರಿದಂತೆ ರೌಳತುಲ್ ಉಲೂಂ ಮದ್ರಸ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ವಿದ್ಯಾರ್ಥಿಗಳು ದೇಶಭಕ್ತಿ, ರಾಷ್ಟ್ರದ ಏಕತೆ ಮತ್ತು ಸ್ವಾತಂತ್ರ್ಯದ ಮಹತ್ವವನ್ನು ಸಾರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಕಾರ್ಯಕ್ರಮವು ದೇಶಭಕ್ತಿ, ಸೌಹಾರ್ದತೆ ಹಾಗೂ ಸಾಮಾಜಿಕ ಏಕತೆಯ ಸಂದೇಶವನ್ನು ಸಾರುವ ಮೂಲಕ ಯಶಸ್ವಿಯಾಗಿ ನೆರವೇರಿತು.