Kodagu

ಗ್ರಾ. ಪಂ. ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನ ಆಚರಣೆ

admincoorgdaily

ಗ್ರಾ. ಪಂ. ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನ ಆಚರಣೆ

ಸಿದ್ದಾಪುರ :- ಗ್ರಾಮ ಪಂಚಾಯತ್ ಮತ್ತು ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ ಪಟ್ಟಣದಲ್ಲಿ ಸ್ವಾತಂತ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಗ್ರಾಮ ಪಂಚಾಯತ್ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಅಭಿವೃದ್ಧಿ ಅಧಿಕಾರಿ ಸತೀಶ್ ರವರು ಸ್ವಾತಂತ್ರ ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

 ನಂತರ ಸಂಜೀವಿನಿ ಒಕ್ಕೂಟ ಅಮೃತ ಸರೋವರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷೆ ತುಳಸಿ ಗಣಪತಿ ಧ್ವಜಾರೋಹಣ ನೆರವೇರಿಸಿದರು ಸ್ಥಳಿಯ ಖಾಸಾಗಿ ಶಾಲಾ ಮಕ್ಕಳಿಂದ ಪಟ್ಟಣದಲ್ಲಿ ಪಥ ಸಂಚಲನಡೆಸಿ ಬಸ್ಸ್ ನಿಲ್ದಾಣದಲ್ಲಿ ಕೊನೆಗೊಂಡಿತು. ಈ ಸಂದರ್ಭದಲ್ಲಿ ಮಕ್ಕಳ ಭಾಷಣ ಕಾರ್ಯಕ್ರಮ ಕ್ಕೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದರು.