Kodagu

ಎಮ್ಮೆಮಾಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

admincoorgdaily

ಎಮ್ಮೆಮಾಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಮಡಿಕೇರಿ:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಎಮ್ಮೆ ಮಾಡುವಿನಲ್ಲಿ ,ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ, ಚಿತ್ರಕಲಾ ಸ್ಪರ್ಧೆ, ಛದ್ಮವೇಷ ಹಾಗೂ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳ ನೃತ್ಯವು ಪೋಷಕರ ಗಮನ ಸೆಳೆದವು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಅಬ್ದುಲ್ ರಹಿಮಾನ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ನೆರೆದಿದ್ದ ಸರ್ವರನ್ನು ಸಹ ಶಿಕ್ಷಕಿ ಶ್ರೀಮತಿ ಝಕಿಯಾಖಾನಂ ಸ್ವಾಗತಿಸಿದರು.ದಿನದ ಮಹತ್ವವನ್ನು ಕುರಿತು ಸಹ ಶಿಕ್ಷಕಿ ಶ್ರೀಮತಿ ಇಂದಿರಾರವರು ಮಾತನಾಡಿದರು, ಈ ಕಾರ್ಯಕ್ರಮವನ್ನು ಸಹ ಶಿಕ್ಷಕಿ ಶ್ರೀಮತಿ ಸುಮಿತ್ರ ರವರು ನಿರೂಪಿಸಿದರು. ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಸೀತಮ್ಮ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸರ್ವರನ್ನು ವಂದಿಸಿದರು.

ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು ,ಉಪಾಧ್ಯಕ್ಷರು, ಸದಸ್ಯರು, ಪೋಷಕರು , ಸಹ ಶಿಕ್ಷಕರಾದ ಶ್ರೀ ಚಂದ್ರಶೇಖರ ರವರು ಮತ್ತು ಶ್ರೀಮತಿ ದಿವ್ಯ ರವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.