Kodagu

ಕಕ್ಕಬ್ಬೆ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

admincoorgdaily

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು:ನಾಪೋಕ್ಲು ಸಮೀಪದ ಕಕ್ಕಬ್ಬೆ ಕೇಂದ್ರ ವಿದ್ಯಾಸಂಸ್ಥೆಯ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ವಿದ್ಯಾಸಂಸ್ಥೆಯ ಅಧ್ಯಕ್ಷ ಕೇಟೋಳಿರ ಕುಟ್ಟಪ್ಪ ಧ್ವಜಾರೋಹಣ ನೆರವೇರಿಸಿದರು. ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪಯ್ಯಡಿ ಹಂಸ,ಭಾತ್ಮೀದಾರರಾದ ಕಲ್ಯಾಟಂಡ ಸುದಾ ಗಣಪತಿ,ಮುಖ್ಯ ಶಿಕ್ಷಕ ಅನಿಲ್ ರಾಜ್,ಶಿಕ್ಷಕ ವೃಂದ ಹಾಜರಿದ್ದರು.ನಂತರ ವಿದ್ಯಾರ್ಥಿಗಳಿಂದ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.