ಕೊಟ್ಟಮುಡಿ ಮರ್ಕಝ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ನಾಪೋಕ್ಲು:ಕೊಟ್ಟಮುಡಿ ಮರ್ಕಝ್ ಕ್ಯಾಂಪಸ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಖಾಫಿ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಶಾಲಾ ಸಮಿತಿ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕುಂಜಿಲ, ಸಂಸ್ಥೆಯ ಉಪಾಧ್ಯಕ್ಷ ಕುಟ್ಟಿ ಹಾಜಿ,ಸಂಸ್ಥೆಯ ಆಡಳಿತ ಸಮಿತಿ ಸದಸ್ಯ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಎಚ್.ಎ ಹಂಸ, ಆಡಳಿತಾಧಿಕಾರಿ ,ಹಾಗೂ ಪಂಚಾಯತ್ ಸದಸ್ಯರಾದ ಹಮೀದ್ ಕಬಡಕೇರಿ,ಗ್ರಾಮ ಪಂಚಾಯತ್ ಸದಸ್ಯ ಮೊಯ್ದು ಕೊಟ್ಟಮುಡಿ, ದಅವಾ ಕಾಲೇಜು ಪ್ರಾಂಶುಪಾಲರಾದ ಹುಸೈನ್ ನೂರಾನಿ, ಶಾಲಾ ಮುಖ್ಯೋಪಾಧ್ಯಾಯರಾದ ಮೊಹಮ್ಮದ್ ಶಾಫಿ ಮುಈನಿ, ಕಾಲೇಜು ಪ್ರಾಂಶುಪಾಲರು , ಶಿಕ್ಷಕ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಭಾಗವಹಿಸಿದ್ದರು.