ಕಡಂಗ ಮುಹ್ಯಿದ್ದೀನ್ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
admincoorgdaily
ಕಡಂಗ:ಮುಹ್ಯಿದ್ದೀನ್ ಜುಮಾ ಮಸ್ಜಿದ್ ಹಾಗೂ ಮನ್ಶಉಲ್ ಉಲೂಂ ಮದ್ರಸ ಕಡಂಗ ವಿದ್ಯಾರ್ಥಿಗಳು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು. ಕಾರ್ಯಕ್ರಮ ಪ್ರಾರ್ಥನೆಯನ್ನು ಖತೀಬ್ ರಫೀಖ್ ಲತೀಫಿ ನೆರವೇರಿಸಿದರು. ಪ್ರಾಂಶುಪಾಲರಾದ ಸುಹೈಬ್ ಫೈಝಿ ಸ್ವಾಗತಿಸಿದರು. ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಅಬ್ದುಲ್ಲಾ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಅಬ್ದುರ್ರಹ್ಮಾನ್, ಕೋಶಾಧಿಕಾರಿ ರಝಾಖ್,ಉಪಾಧ್ಯಕ್ಷರಾದ ಸಲಾಂ ಹಾಗೂ ಜಮಾಅತ್ ಸಮಿತಿ ಪದಾಧಿಕಾರಿಗಳು,ಅಧ್ಯಾಪಕರು,ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.