ಶನಿವಾರಸಂತೆ:ಹಂಡ್ಲಿ ಗ್ರಾಮ ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಶನಿವಾರಸಂತೆ : ಹಂಡ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಹಂಡ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಾತಂತ್ರೋತ್ಸವ ಕಾರ್ಯಕ್ರಮ ನೆರವೇರಿತು. ಧ್ವಜಾರೋಹಣವನ್ನು ಹಂಡ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಧಾ ಈರೇಶ್ ನೆರವೇರಿಸಿದರು. ಗ್ರಾಮ ಪಂಚಾಯತ್ ಸದಸ್ಯರು ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.