ಭಾರತೀಯ ಸೇನೆಯ ಘರ್ ಘರ್ ಶೌರ್ಯ ಸನ್ಮಾನ್ ಗೌರವ ಕಾರ್ಯಕ್ರಮ: ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಪೆಮ್ಮಂಡ ಕಾವೇರಪ್ಪ ಸಮಾಧಿಗೆ ಪುಷ್ಪ ನಮನ

ಮಡಿಕೇರಿ : 26ನೇ ವರ್ಷದ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ವೀರ ಯೋದರ ಸ್ಮರಣಾರ್ಥದ ಭಾಗವಾಗಿ, 1999 ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ಮಣ್ಣಿನ ವೀರ ಪುತ್ರರು ಮಾಡಿದ ಅತ್ಯುನ್ನತ ತ್ಯಾಗಗಳನ್ನು ಗೌರವಿಸಲು ಮತ್ತು ಸ್ಮರಿಸಲು ಭಾರತೀಯ ಸೇನೆಯು ಘರ್ ಘರ್ ಶೌರ್ಯ ಸನ್ಮಾನ್ ವಿಶೇಷ ಸಂಪರ್ಕ ಕಾರ್ಯಕ್ರಮವನ್ನು ನಡೆಸಿ ಕುಟುಂಬವನ್ನ ಗೌರವಿಸಿ ನಿಮ್ಮೊಂದಿಗೆ ಭಾರತೀಯ ಸೇನೆ ಸದ ಇರುತ್ತೆ ಎಂಬ ಸಂದೇಶ ಸಾರುವ ಮೂಲಕ ಸೇನೆ ವತಿಯಿಂದ ಸ್ಮರಣಿಕೆ ಮತ್ತು ಕೃತಜ್ಞತಾ ಪತ್ರವನ್ನು ಪ್ರಧಾನ ಮಾಡುವ ಸರಳ ಕಾರ್ಯಕ್ರಮ ವಿರಾಜಪೇಟೆ ತಾಲ್ಲೂಕಿನ ಮೈತಾಡಿ ಗ್ರಾಮದಲ್ಲಿ ನಡೆಯಿತು.
ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಮತ್ತು ಮೂವರು ಇತರ ಶ್ರೇಣಿಗಳು (ಒಆರ್) ಒಳಗೊಂಡ ಸೇನಾ ನಿಯೋಗದ ಆರು ಮಂದಿ ತಂಡ ಕಾರ್ಗಿಲ್ ಯುದ್ಧ ವೀರರ ಸ್ಥಳೀಯ ಸ್ಥಳಗಳಿಗೆ ಭೇಟಿ ನೀಡಿ ಅವರ ಹತ್ತಿರದ ಸಂಬಂಧಿಕರನ್ನು ಭೇಟಿಯಾಗಿಹುತಾತ್ಮ ಯೋಧರ ಸೇವೆಯನ್ನ ಗೌರವಿಸಿ ಸೇನೆ ಸದಾ ಕುಟುಂಬದೊಂದಿಗೆ ಇರುತ್ತದೆ ಎಂಬ ಸಂದೇಶದೊಂದಿಗೆ ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಕಾವೇರಪ್ಪನವರ ಸಮಾಧಿಗೆ ತೆರಳಿ ಗೌರವ ಪೂರಕವಾಗಿ ಪುಷ್ಪ ನಮನ ಸಲ್ಲಿಸಿ ಸೇನಾ ಗೌರವ ಸೂಚಿಸಿದರು.
ಜೂನಿಯರ್ ಕಮಿಷನ್ಡ್ ಆಫೀಸರ್ ನಾಯಬ್/ಸುಭೇಧಾರ್-ಕಿಂಗಸ್ಲೀನ್ ಮಾತನಾಡಿ 26ನೇ ವರ್ಷದ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ವೀರ ಯೋದರ ಸ್ಮರಣಾರ್ಥದ ಭಾಗವಾಗಿ, 1999 ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ವೀರ ಪುತ್ರರು ಮಾಡಿದ ಅತ್ಯುನ್ನತ ತ್ಯಾಗಗಳನ್ನು ಗೌರವಿಸಲು ಮತ್ತು ಸ್ಮರಿಸಲು ಭಾರತೀಯ ಸೇನೆಯು ಘರ್ ಘರ್ ಶೌರ್ಯ ಸನ್ಮಾನ್ ವಿಶೇಷ ಸಂಪರ್ಕ ಕಾರ್ಯಕ್ರಮವನ್ನು ನಡೆಸಿ ಕುಟುಂಬವನ್ನ ಗೌರವಿಸಿ ನಿಮ್ಮೊಂದಿಗೆ ಭಾರತೀಯ ಸೇನೆ ಸದ ಇರುತ್ತೆ ಎಂಬ ಸಂದೇಶ ಸಾರುವ ಮೂಲಕ ಸೇನೆ ವತಿಯಿಂದ ಸ್ಮರಣಿಕೆ ಮತ್ತು ಕೃತಜ್ಞತಾ ಪತ್ರವನ್ನು ಪ್ರಧಾನ ಮಾಡುವ ಕಾರ್ಯಕ್ರಮ ಕಾರ್ಗಿಲ್ ಯುದ್ಧದಲ್ಲಿ ಮಡಿದ ವಿವಿಧ ರಾಜ್ಯಗಳ ಹುತಾತ್ಮ ಯೋಧರ ಗ್ರಾಮಗಳಿಗೆ ತೆರಳಿ ಗೌರವ ಸೂಚಿಸಲಾಗುತ್ತಿದೆ.
ಈ ಹೃತ್ಪೂರ್ವಕ ಪ್ರಯತ್ನವು ಕೇವಲ ಗೌರವವಲ್ಲ, ಬದಲಾಗಿ ಭಾರತೀಯ ಸೇನೆ ಮತ್ತು ಅದರ ವೀರ ಸೈನಿಕರ ನಡುವಿನ ಅವಿನಾಭಾವ ಬಾಂಧವ್ಯದ ಪುನರುಚ್ಚರಣೆಯಾಗಿದೆ. ಇದು ಹುತಾತ್ಮರನ್ನು ಗೌರವಿಸುವ ಮತ್ತು ಅವರ ಕುಟುಂಬಗಳೊಂದಿಗೆ ನಿಲ್ಲುವ ನಮ್ಮ ಆಳವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.
ಸೇನಾ ತಂಡದೊಂದಿಗೆ ಆಗಮಿಸಿದ ಕೊಡಗಿನ ನಂಜರಾಯಪಟ್ಟಣದ ನಾಯಬ್ ಸುಭೇದಾರ- ಸಿ ಎಲ್ ತಿಲಕ್ ಮಾತನಾಡಿ ಕೊಡಗಿನ ವೀರ ಪುತ್ರ ಕಾವೇರಪ್ಪ ಹುತಾತ್ಮರಾಗಿ 26 ವರ್ಷ ಕಳೆದಿದೆ ನೀನು ಎಲ್ಲಿ ಸೇವೆ ಸಲ್ಲಿಸಿ ದೇಶಕ್ಕಾಗಿ ತ್ಯಾಗ ಮಾಡಿ ಹುತಾತ್ಮ ಯೋಧರನ್ನು ಗೌರವಿಸುವ ಹಾಗೂ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಭಾರತೀಯ ಸೇನೆ ಮಾಡುತ್ತಿರುವುದು ಹೆಮ್ಮೆಯ ವಿಷಯ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವ ಮೂಲಕ ದೇಶ ಸೇವೆ ಮಾಡಬೇಕೆಂದು ಹೇಳಿದರು.
ಹುತಾತ್ಮ ಯೋಧ ಕಾವೇರಪ್ಪ ಅವರ ಪತ್ನಿ ಶೋಭಾ ಮಾತನಾಡಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭ ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿ ಹುತಾತ್ಮರಾಗಿ 26 ವರ್ಷ ಕಳೆದಿದೆ ಈ ಸಂದರ್ಭದಲ್ಲಿ ಭಾರತೀಯ ಸೇನೆ ಹುತಾತ್ಮರನ್ನ ಗೌರವಿಸುವ ಮೂಲಕ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡುತ್ತಿದೆ ಎಂದು ಸೇನೆಯ ಕಾಳಜಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಹೋದರ ಅರುಣ್ ಮಾತನಾಡಿ ಅಣ್ಣ ಕಾವೇರಪ್ಪ ಹುತಾತ್ಮರಾಗಿ 26 ವರ್ಷ ಕಳೆದರೂ ಭಾರತೀಯ ಸೇನೆ ಅಧಿಕಾರಿಗಳ ತಂಡ ಕಾರ್ಗಿಲ್ ನಿಂದ ಆಗಮಿಸಿ ಕುಟುಂಬಕ್ಕೆ ಧೈರ್ಯ ತುಂಬುವ ಮೂಲಕ ಸೇನೆ ಸದಾ ನಿಮ್ಮೊಂದಿಗೆ ಇರುತ್ತದೆ ಎಂದು ಹೇಳಿ ಕುಟುಂಬದವರನ್ನು ಗೌರವಿಸಿದ್ದಾರೆ.
ನಮ್ಮ ಕುಟುಂಬದ ಹಲವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ ಅಣ್ಣ ಕಾವೇರಪ್ಪ ಮಾತ್ರ ದೇಶಕ್ಕಾಗಿ ವೀರ ಮರಣ ಹೊಂದಿದ್ದಾರೆ ಭಾರತೀಯ ಸೇನೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು. ಇದೇ ಸಂದರ್ಭ ಗ್ರಾಮಕ್ಕೆ ಆಗಮಿಸಿದ ಸೇನಾ ತಂಡದವರನ್ನು ಹೂಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡು ವಿಶೇಷವಾಗಿ ಸನ್ಮಾನಿಸಿ ಗೌರವಿಸಿ ಬೀಳ್ಕೊಟ್ಟರು. ಈ ಸಂದರ್ಭ ಗ್ರಾಮದ ಪ್ರಮುಖರಾದ ಅರುಣ್, ಅಪ್ಪಯ್ಯ, ಸಿಂದು,ಪೊನ್ನಪ್ಪ,ನಾಣಯ್ಯ,ಲೋಕೇಶ್, ಸುರೇಶ್, ಜೋಯಪ್ಪ, ಈರಪ್ಪ, ಸುಬಯ್ಯ, ಸೇನಾ ಸಿಬ್ಬಂದಿಗಳಾದ ಹವಾಲ್ದಾರ್ ರಿಜೀಶ್,ರ
ಮೇಶ್ ರೆಡ್ಡಿ, ಸೈಯೂಜ್ ಸೇರಿದಂತೆ ಮತ್ತಿತರರು ಹಾಜರಿದ್ದರು.
What's Your Reaction?






