ಇಂದಿರಾ ಗಾಂಧಿ ಜನ್ಮದಿನ:ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ
ಬೆಂಗಳೂರು:ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯಂದು, ಅವರಿಂದ ಸ್ಥಾಪಿಸಲ್ಪಟ್ಟ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ ಹಿನ್ನೆಲೆಯಲ್ಲಿ, ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಉದ್ಘಾಟಿಸಿ ಮಂಡಳಿಯ ಸಾಧನೆಗಳನ್ನು ಸ್ಮರಿಸಿದ್ದರು.
ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರೂ ಹಾಗೂ ಶಾಸಕರಾದ ಪಿ.ಎಂ ನರೇಂದ್ರಸ್ವಾಮಿ ರವರು ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಸಚಿವರುಗಳಾದ ಈಶ್ವರ್ ಖಂಡ್ರೆ, ಚೆಲುವರಾಯಸ್ವಾಮಿ, ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಚೆಲುವರಾಯಸ್ವಾಮಿ, ದಿನೇಶ್ ಗುಂಡೂರಾವ್, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ವಿಧಾನಪರಿಷತ್ ಸದಸ್ಯರಾದ ಸುಧಾಮದಾಸ್, ದಿನೇಶ್ ಗೂಳೀಗೌಡ ಸೇರಿ ಹಲವು ಶಾಸಕರು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.
