ಮಡಿಕೇರಿಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕುರಿತು ಮಾಹಿತಿ ಕಾರ್ಯಾಗಾರ

Dec 17, 2025 - 10:30
 0  262
ಮಡಿಕೇರಿಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕುರಿತು ಮಾಹಿತಿ ಕಾರ್ಯಾಗಾರ

ಮಡಿಕೇರಿ: ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಕುರಿತು ಅರಿವು ಕಾರ್ಯಾಗಾರ ಕಾರ್ಯಕ್ರಮವು ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು.

 ಕಾರ್ಯಕ್ರಮವನ್ನು ಉದ್ಘಾಟಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಸನ್ನಕುಮಾರ್‌ರವರು ಮಾತನಾಡಿ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯು ಕುಸಿಯುತ್ತಿರುವ ಮಕ್ಕಳ ಲಿಂಗ ಅನುಪಾತವನ್ನು ಪರಿಹರಿಸುವ ಮತ್ತು ಹೆಣ್ಣು ಮಗುವಿನ ಬದುಕುಳಿಯುವಿಕೆ, ರಕ್ಷಣೆ ಮತ್ತು ಹೆಣ್ಣು ಮಗುವಿನ ಶಿಕ್ಷಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಬರುವ ಸಂಬಲ್ ಯೋಜನೆಗಳಾದ ಸಖಿ ಒನ್ ಸ್ಟಾಫ್ ಸೆಂಟರ್, ಮಹಿಳಾ ಸಹಾಯವಾಣಿ ಹಾಗೂ ಸಾಮರ್ಥ್ಯ ಯೋಜನೆಗಳಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಸಖಿ ನಿವಾಸ, ಶಕ್ತಿ ಸದನ್ ಬಗ್ಗೆ ತಿಳಿಸಿದ ಅವರು ಫಲಾನುಭವಿಗಳು ಯಾವುದೇ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಂಡು, ಅಗತ್ಯವಿದ್ದವರಿಗೆ ಯೋಜನೆಗಳ ಪ್ರಯೋಜನ ದೊರಕುವಂತೆ ಮಾಡಬೇಕು ಎಂದು ತಿಳಿಸಿದರು.

ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಸೀತಾಲಕ್ಷ್ಮಿ ಟಿ.ಎಸ್. ರವರು ಮಾತನಾಡಿ, ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ಸುಧಾರಣೆ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಸರ್ಕಾರವು ಪೋಷಣ್ ಅಭಿಯಾನ ಯೋಜನೆಯ ಮೂಲಕ ಮಕ್ಕಳು, ಹೆಣ್ಣು ಮಕ್ಕಳು, ಗರ್ಭಿಣಿ, ಬಾಣಂತಿಯರಲ್ಲಿ ಪೌಷ್ಠಿಕಾಂಶ ಕೊರತೆಯನ್ನು ನೀಗಿಸುವುದಕ್ಕಾಗಿ ಶ್ರಮ ಪಡುತ್ತಿದೆ ಎಂದರು.

ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶೀಲಾ ಹಾಗೂ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ವನಿತಾರವರು ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಣಕಾಸು ಸಾಕ್ಷರತೆ ಮತ್ತು ಲೆಕ್ಕಪರಿಶೋಧಕರಾದ ಶ್ರೀಮತಿ ನಳಿನಿ, ಪೋಷಣ್ ಅಭಿಯಾನದ ಜಿಲ್ಲಾ ಕಾರ್ಯಕ್ರಮ ಸಹಾಯಕಿ ಶ್ರೀಮತಿ ಕಾವ್ಯ, ಮಡಿಕೇರಿ ತಾಲೂಕು ಸಂಯೋಜಕಿ ಶ್ರೀಮತಿ ತೇಜಸ್ವಿನಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 2
Wow Wow 0