Kodagu

ರಾಜ್ಯ ಆಂತರಿಕ ರಕ್ಷಣಾ ವಿಭಾಗದ ಐಜಿಪಿ ವಿಕಾಸ್ ಕುಮಾರ್ ವಿಕಾಸ್‌ರಿಂದ ಜಿಲ್ಲಾ ಪೊಲೀಸ್ ಕಚೇರಿ ಪರಿವೀಕ್ಷಣೆ

admincoorgdaily

ರಾಜ್ಯ ಆಂತರಿಕ ರಕ್ಷಣಾ ವಿಭಾಗದ ಐಜಿಪಿ ವಿಕಾಸ್ ಕುಮಾರ್ ವಿಕಾಸ್‌ರಿಂದ ಜಿಲ್ಲಾ ಪೊಲೀಸ್ ಕಚೇರಿ ಪರಿವೀಕ್ಷಣೆ

ಮಡಿಕೇರಿ: ರಾಜ್ಯ ಆಂತರಿಕ ರಕ್ಷಣಾ ವಿಭಾಗದ ಐಜಿಪಿ ವಿಕಾಸ್ ಕುಮಾರ್ ವಿಕಾಸ್, ಐಪಿಎಸ್ ಅವರು ಇಂದು ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಹಾಜರಿದ್ದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಜಿಲ್ಲೆಯ ಕಾನೂನು ಸುವ್ಯವಸ್ಥೆ ವಿಚಾರವಾಗಿ ವಿಸ್ತೃತ ಚರ್ಚೆ ನಡೆಸಿದರು.

ಜಿಲ್ಲೆಯ ಪ್ರಸ್ತುತ ಪರಿಸ್ಥಿತಿ, ಅಪರಾಧ ನಿಯಂತ್ರಣ, ಕರ್ತವ್ಯ ನಿರ್ವಹಣೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಈ ಸಂದರ್ಭ ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಇದ್ದರು.