ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರಿಂದ ಸುಂದರನಗರ ಅಂಗನವಾಡಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

Jan 20, 2026 - 10:15
 0  257
ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರಿಂದ ಸುಂದರನಗರ ಅಂಗನವಾಡಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಕುಶಾಲನಗರ,ಜ೨೦: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸುಂದರನಗರದ ಅಂಗನವಾಡಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಲಿದ್ದು, ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರು ಪರಿಶೀಲನೆ ನಡೆಸಿದರು.

 ತಾಲ್ಲೂಕು ಪಂಚಾಯಿತಿ ಅನುದಾನದಡಿ 3 ಲಕ್ಷ ರೂ ವೆಚ್ಚದಲ್ಲಿ ಸುಂದರನಗರ ಅಂಗನವಾಡಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕೆ.ಬಿ.ಶಂಶುದ್ಧೀನ್ ಅವರು ಕಾಮಗಾರಿ ವೀಕ್ಷಣೆ ನಡೆಸಿದರು.

ಅಂಗನವಾಡಿಗೆ ಹೆಚ್ಚುವರಿ ಕೊಠಡಿ, ವೆಳಾಂಡಕ್ಕೆ ಕಾಂಕ್ರೀಟಿಕರಣ, ಛಾವಣಿ ದುರಸ್ತಿ, ಬಣ್ಣ ಬಳೆಯುವಿಕೆ ಸೇರಿದಂತೆ ಇನ್ನಿತರ ಕೆಲಸಗಳು ನಡೆಯುತ್ತಿವೆ. ಕಾಮಗಾರಿ ಪರಿಶೀಲಿಸಿ ಮಾತನಾಡಿದ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್, ಸುಂದರನಗರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಪರಿಶೀಲಿಸಲಾಗಿದೆ. ಗುತ್ತಿಗೆದಾರನಿಗೆ ಕಾಮಗಾರಿ ಗುಣಮಟ್ಟ ಕಾಪಾಡುವಂತೆ ಹಾಗೂ ಕಳಪೆ ಕಾಮಗಾರಿ ನಡೆಸದಂತೆ ಸೂಚಿಸಲಾಗಿದೆ ಎಂದರು‌. ಈ ಸಂದರ್ಭ ಅಂಗನವಾಡಿ ಶಿಕ್ಷಕಿ ಬೋಜಮ್ಮ ಹಾಗೂ ಗ್ರಾಮಸ್ಥರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0