ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಿಮೆ ಸೌಲಭ್ಯ

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಿಮೆ ಸೌಲಭ್ಯ

ಮಡಿಕೇರಿ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸದಸ್ಯರಿಗಾಗಿ ವಿಮೆ ಸೌಲಭ್ಯ ಕಲ್ಪಿಸುವ ಕಾರ್ಯಕ್ರಮ ಡಿ. 8 ರಂದು ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಮಡಿಕೇರಿ ನಗರದ ಪತ್ರಿಕಾ ಭವನದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಿಪಬ್ಲಿಕ್ ಟಿವಿ ನೆಟ್ ವರ್ಕ್ ಅಧ್ಯಕ್ಷ ಚೇರಂಡ ಕಿಶನ್ ಮಾದಪ್ಪ ಚಾಲನೆ ನೀಡಲಿದ್ದಾರೆ.

 ಮುಖ್ಯ ಅತಿಥಿಗಳಾಗಿ ಕರ್ನಾಟಕ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ನಿರ್ದೇಶಕಿ ಬಿ.ಆರ್. ಸವಿತಾ ರೈ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.