ತೀವ್ರಗೊಳಿಸಿದ ಐಇಸಿ ಅಭಿಯಾನ-ಮ್ಯಾರಥಾನ್ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Aug 29, 2026 - 22:44
 0  9
ತೀವ್ರಗೊಳಿಸಿದ ಐಇಸಿ ಅಭಿಯಾನ-ಮ್ಯಾರಥಾನ್ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಮಡಿಕೇರಿ ಆ.29:-ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ವತಿಯಿಂದ ತೀವ್ರಗೊಳಿಸಿದ ಐಇಸಿ ಅಭಿಯಾನದ ಅಂಗವಾಗಿ ಮ್ಯಾರಥಾನ್ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವು ಶನಿವಾರ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. 

ಕಾರ್ಯಕ್ರಮವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿಸ್ಮಯಾ ಚಕ್ರವರ್ತಿ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್‍ಕುಮಾರ್ ಅವರು ಉದ್ಘಾಟಿಸಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್ ಅವರು ಮಾತನಾಡಿ ಮ್ಯಾರಥಾನ್ ಅಂತಹ ಕ್ರೀಡಾ ಚಟುವಟಿಕೆಗಳ ಮೂಲಕ ಯುವಜನರಲ್ಲಿ ಎಚ್‍ಐವಿ/ಏಡ್ಸ್ ಕುರಿತು ಜಾಗೃತಿ ಮೂಡಿಸುವುದು, ಎಚ್‍ಐವಿ ಸೋಂಕಿನ ಹರಡುವಿಕೆ ತಡೆಗಟ್ಟುವ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಎಚ್‍ಐವಿ/ಏಡ್ಸ್ ಸಂಬಂಧಿತ ಲಭ್ಯವಿರುವ ಸೇವೆಗಳ ಕುರಿತು ಮಾಹಿತಿ ನೀಡುವುದು ಈ ತೀವ್ರಗೊಳಿಸಿದ ಐಇಸಿ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ತರಬೇತುದಾರರಾದ ಆಂಟನಿ ಡಿಸೋಜಾ ಅವರು ಯುವಜನರಲ್ಲಿ ಎಚ್‍ಐವಿ ತಡೆಗಟ್ಟುವಿಕೆಯ ಮಹತ್ವದ ಕುರಿತು ಮಾತನಾಡಿದರು. 

ಯುವಜನರು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಂಡು, ಎಚ್‍ಐವಿ/ಏಡ್ಸ್ ಕುರಿತು ಸರಿಯಾದ ಮಾಹಿತಿಯನ್ನು ಪಡೆದು, ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.  

ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಮಹತ್ವ ಹಾಗೂ ಭಾರತೀಯ ಹಾಕಿ ದಿಗ್ಗಜ ಮೇಜರ್ ಧ್ಯಾನ್‍ಚಂದ್ ಅವರ ಕ್ರೀಡಾ ಸಾಧನೆಯನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುನಿಲ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಧನಂಜಯ ಮತ್ತು ಉತ್ತಯ್ಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಆಂಟನಿ ಡಿಸೋಜಾ, ಬಿಂದಿಯಾ ಹಾಗೂ ಮಹಾಬಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತರಬೇತುದಾರರು ರಮೇಶ್, ಅಂತರರಾಷ್ಟ್ರೀಯ ಹಿರಿಯ ಬ್ಯಾಡ್ಮಿಂಟನ್ ಕ್ರೀಡಾಪಟು ಜ್ಯೋತಿ ಸೋಮಯ್ಯ ಉಪಸ್ಥಿತರಿದ್ದರು. 

ಅಲ್ಲದೆ ಜಿಲ್ಲಾ ಮೇಲ್ವಿಚಾರಕರಾದ ಸುನೀತ ಮುತ್ತಣ್ಣ, ಮಲ್ಲೇಶ್, ಅರುಣ್ ಕೌನ್ಸೆಲರ್ ಹಾಗೂ ಉಷಾ, ಡಿಎಪಿಸಿಯು ಕಮಲ, ಸಿಬ್ಬಂದಿ ಭಾಗವಹಿಸಿದ್ದರು.

ಮ್ಯಾರಥಾನ್ ಸ್ಪರ್ಧೆಯ ವಿಜೇತರು: ಬಾಲಕರ ವಿಭಾಗದಲ್ಲಿ ಪ್ರಥಮ ಬಹುಮಾನ ಪ್ರಸನ್ನ ಎಚ್.ಜಿ.– ಕಾವೇರಿ ಕಾಲೇಜು, ವಿರಾಜಪೇಟೆ, ದ್ವಿತೀಯ ಬಹುಮಾನ– ದರ್ಶನ್, ಕಾವೇರಿ ಕಾಲೇಜು, ವಿರಾಜಪೇಟೆ, ತೃತೀಯ ಬಹುಮಾನ ಸುಮನ್ ಬೆಳ್ಳಿಯಪ್ಪ , ಸರ್ಕಾರಿ ಪಾಲಿಟೆಕ್ನಿಕ್, ಕುಶಾಲನಗರ,

ಬಾಲಕಿಯರ ವಿಭಾಗದಲ್ಲಿ ಪ್ರಥಮ ಬಹುಮಾನ ದೀಪಾ ಕೆ.ಎಸ್., ಕಾವೇರಿ ಕಾಲೇಜು, ಗೋಣಿಕೊಪ್ಪ, ದ್ವಿತೀಯ ಬಹುಮಾನ – ರಶ್ಮಿತಾ ಎ.ಆರ್. – ಸರ್ಕಾರಿ ಮಹಿಳಾ ಕಾಲೇಜು, ಮಡಿಕೇರಿ, ತೃತೀಯ ಬಹುಮಾನ – ಚಶಿಮಿತಾ – ಕಾವೇರಿ ಕಾಲೇಜು, ವಿರಾಜಪೇಟೆ

ಮ್ಯಾರಥಾನ್ ಸಂದರ್ಭದಲ್ಲಿ ಯುವಜನರಿಗೆ ಎಚ್‍ಐವಿ/ಏಡ್ಸ್ ತಡೆಗಟ್ಟುವಿಕೆ, ಸುರಕ್ಷಿತ ಜೀವನಶೈಲಿ ಹಾಗೂ ಆರೋಗ್ಯದ ಕುರಿತು ಅರಿವು ಮೂಡಿಸಲಾಯಿತು. ಕ್ರೀಡೆಯ ಮೂಲಕ ಆರೋಗ್ಯ ಮತ್ತು ಎಚ್‍ಐವಿ/ಏಡ್ಸ್ ಜಾಗೃತಿಯನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0