ಅಂತರ್ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿ: ಕೊಡಗು ತಂಡಕ್ಕೆ ದ್ವಿತೀಯ ಸ್ಥಾನ
admincoorgdaily

ತುಮಕೂರು;ಕರ್ನಾಟಕ ರಾಜ್ಯ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ನಡೆಯುತ್ತಿರುವ ಅಂತರ ಜಿಲ್ಲಾ ಫುಟ್ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ (Kodagu DFA) ತಂಡವು ಫೈನಲ್ ನಲ್ಲಿ ವಿರೋಜಿತ ಸೋಲು ಕಂಡಿದೆ.ನಿಗದಿತ ಸಮಯದಲ್ಲಿ ಎರಡು ತಂಡಗಳು 1-1 ಗೋಲುಗಳನ್ನು ಬಾರಿಸಿ ಸಮಬಲ ಸಾಧಿಸಿತು.ಅಂತಿಮವಾಗಿ ಪೆನಾಲ್ಟಿ ಶೂಟೌಟ್ ನಲ್ಲಿ ಬೆಂಗಳೂರು ತಂಡದ ವಿರುದ್ಧ 5-3 ಗೋಲುಗಳ ಅಂತರದಿಂದ ಪರಾಭವಗೊಂಡು,ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.