ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡನೇ ಗೆಲುವು

Jul 9, 2026 - 12:48
Jul 9, 2026 - 12:49
 0  487
ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡನೇ ಗೆಲುವು

ಮಡಿಕೇರಿ,ಜು.9: ಕರ್ನಾಟಕ ರಾಜ್ಯ ಫುಟ್‌ಬಾಲ್ ಸಂಸ್ಥೆಯ ಆಶ್ರಯದಲ್ಲಿ ತುಮಕೂರಿನ ಎಂ.ಜಿ. ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್‌ಬಾಲ್ ತಂಡವು ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ತುಮಕೂರು ತಂಡವನ್ನು ಎದುರಿಸಿದ ಕೊಡಗು ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿ 8-0 ಗೋಲುಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದರು. ತಂಡದ ಪರ ಸಾಬಿತ್ ಎರಡು ಗೋಲು, ಸವಾದ್ ಎರಡು ಗೋಲು, ಫಾರೂಕ್ ಒಂದು ಗೋಲು, ಅಜಿತ್ ಒಂದು ಗೋಲು ಹಾಗೂ ದಿವಾಕರ್ ಒಂದು ಗೋಲು ದಾಖಲಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಎರಡನೇ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವನ್ನು ಎದುರಿಸಿದ ಕೊಡಗು ತಂಡವು ಮತ್ತೊಮ್ಮೆ ತನ್ನ ಪ್ರಾಬಲ್ಯ ಮೆರೆದಿತು. ಪಂದ್ಯದುದ್ದಕ್ಕೂ ಎದುರಾಳಿಗೆ ಯಾವುದೇ ಅವಕಾಶ ನೀಡದ ಕೊಡಗು ತಂಡವು 4-0 ಗೋಲುಗಳ ಅಂತರದಿಂದ ಜಯಭೇರಿ ಬಾರಿಸಿತು. ಈ ಪಂದ್ಯದಲ್ಲಿ ರಂಗ ಎರಡು ಗೋಲು, ತಂಡದ ನಾಯಕ ವಿಜು ಒಂದು ಗೋಲು ಹಾಗೂ ಮುಸ್ತಾಕ್ ಒಂದು ಗೋಲು ದಾಖಲಿಸಿ ತಂಡದ ಗೆಲುವನ್ನು ಖಚಿತಪಡಿಸಿದರು.

ವರದಿ:ಅಶೋಕ್ ಮಡಿಕೇರಿ

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0