ಕೊಡಗು ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Jun 22, 2026 - 17:20
 0  103
ಕೊಡಗು ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮಡಿಕೇರಿ ಜೂ. 22- ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕೊಡಗು ವಿದ್ಯಾಲಯದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವು ಪ್ರಾಂಶುಪಾಲರಾದ ಕೆ. ಎಸ್. ಸುಮಿತ್ರಾ ಉಪಸ್ಥಿತಿಯಲ್ಲಿ ನಡೆಯಿತು. ಯೋಗ ಶಿಕ್ಷಕಿ ವಿದ್ಯಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳು, ಪ್ರಾಣಾಯಾಮಗಳು ಹಾಗೂ ಧ್ಯಾನಾಭ್ಯಾಸಗಳನ್ನು ಪ್ರದರ್ಶಿಸಿದರು.

ವಿದ್ಯಾರ್ಥಿಗಳಿಂದ ನಡೆದ ಯೋಗ ಪ್ರದರ್ಶನಗಳು ಗಮನ ಸೆಳೆದವು. ಈ ಸಂದರ್ಭದಲ್ಲಿ ಯೋಗದ ಮಹತ್ವ ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಅದರ ಸಕಾರಾತ್ಮಕ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

ನಿಯಮಿತ ಯೋಗಾಭ್ಯಾಸವು ಆರೋಗ್ಯಕರ ಜೀವನಶೈಲಿಯನ್ನು ರೂಪಿಸುವುದರ ಜೊತೆಗೆ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಮನೋಬಲವನ್ನು ವೃದ್ಧಿಸುತ್ತದೆ ಎಂಬ ಸಂದೇಶವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ಯೋಗವನ್ನು ತಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳುವ ಸಂಕಲ್ಪ ಕೈಗೊಂಡರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0