ಪೊನ್ನಂಪೇಟೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಶಾಸಕ ಎ.ಎಸ್ ಪೊನ್ನಣ್ಣ ಭಾಗಿ

Jun 20, 2026 - 11:59
 0  148
ಪೊನ್ನಂಪೇಟೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಶಾಸಕ ಎ.ಎಸ್ ಪೊನ್ನಣ್ಣ ಭಾಗಿ

ಪೊನ್ನಂಪೇಟೆ, ಜೂನ್ 20: ಪೊನ್ನಂಪೇಟೆ ತಾಲೂಕಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭಾಗವಹಿಸಿದರು.

ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಆಶ್ರಮ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, "ಭಾರತದ ಇತಿಹಾಸದ ಪುಟಗಳನ್ನು ತೆರೆದು ನೋಡಿದರೆ ಅತ್ಯಂತ ಪೌರಾಣಿಕ ಹಿನ್ನೆಲೆಯುಳ್ಳ ಯೋಗಾಸನ ಅಭ್ಯಾಸವು ಮಾನವನ ಆರೋಗ್ಯ ಸುಧಾರಣೆ ಹಾಗೂ ಸದೃಢವಾಗಿರುವಲ್ಲಿ ತುಂಬಾ ಸಹಕಾರಿಯಾಗಲಿದೆ. ಇತ್ತೀಚಿನ ದಿನಗಳಲ್ಲಿ ವಿಶ್ವಾದ್ಯಂತ ಮನ್ನಣೆ ಪಡೆದಿರುವ ಯೋಗಾಸನವು ಜನರ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಿಯಮಿತವಾಗಿ ಯೋಗಾಸನ ಮಾಡುತ್ತಾ ಎಲ್ಲರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು" ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಶ್ರೀ ಶ್ರೀ ಪರಹಿತನಂದ ಮಹಾರಾಜಾ ಸ್ವಾಮಿ, ವೇದಿಕೆಯ ಮೇಲಿದ್ದ ಮುಖ್ಯ ಅತಿಥಿಗಳು ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0