ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಮಡಿಕೇರಿ:-ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೊಡಗು ಇವರ ವತಿಯಿಂದ 2025-26 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿ ಸಾಲ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಇಎ/ಸಿಇಟಿ/ನೀಟ್ ಮುಖಾಂತರ ಎಂಬಿಬಿಎಸ್, ಬಿ.ಡಿ.ಎಸ್,ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ ಆಯುಷ್, ಫಾರ್ಮಸಿ, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವ್ಯಾಸಂಗಗಳಿಗೆ ಆಯ್ಕೆಯಾಗಿ 2/3 ಅಥವಾ ನಂತರದ ವರ್ಷಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗುತ್ತದೆ.
ಅರಿವು (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‍ಸೈಟ್ https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಕಂಪ್ಯೂಟರ್ ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಗಳನ್ನು ಪ್ರಿಂಟೌಟ್ ಪಡೆದು ಕ್ಯುಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ. ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಪೋಟೋ 04 (ಪಾಸ್ ಪೋರ್ಟ್ ಸೈಜ್), ಸಿ.ಇ.ಟಿ/ನೀಟ್ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ರೂ.100 ರ ಛಾಪಕಾಗದದಲ್ಲಿ ನಷ್ಟ ಪರಿಹಾರ ಬಾಂಡ್ ಈ ಎಲ್ಲಾ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ. ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿ ಪಡೆಯಲು ಈ ಕಚೇರಿಯ ದೂರವಾಣಿ ಸಂಖ್ಯೆ 08272-201449 ನ್ನು ಸಂಪರ್ಕಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ, 3 ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
