ಸಾಲ‌ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Jun 8, 2026 - 23:54
 0  1.1k
ಸಾಲ‌ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ ಜೂ.08:-ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2026-27ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  

        ಅರ್ಜಿ ಸಲ್ಲಿಸಲು ಜೂನ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿದ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ((KEA Via/CET/NEET ಮುಖಾಂತರ) ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ ಆಯು ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗುತ್ತದೆ. CET/NEET ಮುಖೇನ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ "ಅರಿವು" ಯೋಜನೆಯಡಿ ಶೈಕ್ಷಣಿಕ ಸಾಲ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

       ನಿಗಮದ ವೆಬ್‍ಸೈಟ್: https://kmdconline.karnataka.gov.in/ ಮೂಲಕ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿ ಪಡೆಯಲು ಈ ಕಚೇರಿಯ ದೂರಾವಾಣಿ ಸಂಖ್ಯೆ 08272-201449 ನ್ನು ಸಂಪರ್ಕಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 15 ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

What's Your Reaction?

Like Like 2
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0