Kodagu

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

admincoorgdaily

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ:-ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ 2026-27 ನೇ ಸಾಲಿನ ಕ್ರಿಶ್ಚಿಯನ್ ಜನಾಂಗದವರಿಗೆ ಅರಿವು ಯೋಜನೆಯಡಿ ವಿದ್ಯಾಭ್ಯಾಸ ಸಾಲ ಪಡೆಯಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗಮದ ವೆಬ್‍ಸೈಟ್ https://kccdclonline.karnataka.gov.in ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಎಫ್.ಎಂ.ಸಿ ಕಾಲೇಜು ರಸ್ತೆ, ಮಡಿಕೇರಿ ಇಲ್ಲಿಗೆ ಭೇಟಿ ನೀಡಬಹುದು ಅಥವಾ ದೂ.08272 201449ಕ್ಕೆ ಸಂಪರ್ಕಿಸಬಹುದಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 29 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೊಡಗು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.