ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ:-2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಉದ್ಯೋಗವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಹೋಟೆಲ್ ಮ್ಯಾನೇಜ್‍ಮೆಂಟ್ ವೃತ್ತಿಪರ ತರಬೇತಿಯನ್ನು ಇನ್‍ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್, ಬೆಂಗಳೂರು ಇಲ್ಲಿ ನೀಡಲಾಗುವುದು. ಆದುದ್ದರಿಂದ ಈ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಅರ್ಜಿ ಸಲ್ಲಿಸಲು ಆಗಸ್ಟ್, 02 ಕೊನೆಯ ದಿನವಾಗಿದೆ. ಹೋಟೆಲ್ ಮ್ಯಾನೇಜ್‍ಮೆಂಟ್ ವೃತ್ತಿಪರ ತರಬೇತಿಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಕರ್ನಾಟದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದವರಾಗಿರಬೇಕು. ವಿದ್ಯಾರ್ಥಿಯು ಕನಿಷ್ಠ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.8 ಲಕ್ಷಕ್ಕಿಂತ ಮೀರಿರಬಾರದು. ತರಬೇತಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ವಯೋಮಿತಿಯನ್ನು ಕನಿಷ್ಠ 18 ಮತ್ತು ಗರಿಷ್ಠ 35 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಹೋಟೆಲ್ ಮ್ಯಾನೇಜ್‍ಮೆಂಟ್ ವೃತ್ತಿಪರ ತರಬೇತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಹಾರ ಮತ್ತು ವಸತಿಯೊಂದಿಗೆ ಇನ್‍ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್, ಬೆಂಗಳೂರು ಇಲ್ಲಿ ತರಬೇತಿಯನ್ನು ನೀಡಲಾಗುವುದು. ಅರ್ಜಿಯನ್ನು ವೆಬ್‍ಸೈಟ್ https://sevasindhu.karnataka.gov.in/Sevasindhu/DepartmentServicesಮತ್ತು https://dom.karnataka.gov.in ನಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08272-225528/220214, ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ, ದೂರವಾಣಿ ಸಂಖ್ಯೆ: 8548068519, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ.ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ 9972799091. ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂರವಾಣಿ ಸಂಖ್ಯೆ 9900731037, ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.