ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Jun 8, 2026 - 23:51
 0  813
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ ಜೂ.08:-2026-27ನೇ ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಇಲಾಖಾ ವೆಬ್‍ಸೈಟ್ w.w.w.ssp.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 

ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ದಾಖಲಾತಿಗಳೊಂದಿಗೆ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು. 

ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಮೆಟ್ರಿಕ್ ಪೂರ್ವ ಆದಾಯ ಮಿತಿ 1 ರಿಂದ 8 ತರಗತಿಗೆ 6 ಲಕ್ಷ ಮತ್ತು 9 ರಿಂದ 10ನೇ ತರಗತಿಗೆ 2.50 ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದು). ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ), ಇತ್ತೀಚಿನ ಭಾವಚಿತ್ರ, ತಂದೆ/ತಾಯಿ/ಪೋಷಕರ ಆಧಾರ್ ದಾಖಲಾತಿ ಪ್ರತಿ,            

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬೇಕಾದ ಇಲಾಖಾ ವೆಬ್‍ಸೈಟ್ w.w.w.ssp.karnataka.gov.in. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080-44554455 ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ ಅವರ ಕಚೇರಿ ದೂ.ಸಂ. 9480843156, 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0